ವಿದ್ಯಾರ್ಥಿಗಳು ಭ್ರಷ್ಟಾಚಾರ ಸಹಿಸಬಾರದು

IMG_4422
Published on

ತುಮಕೂರು: ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಭ್ರಷ್ಟಾಚಾರ ಕೊನೆಗಾಣಿಸಲು ಜಾರಿಯಾಗಿರುವ ಕಠಿಣ ಕಾನೂನುಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಅಗತ್ಯವಾಗಿದೆ ಎಂದು ಲೋಕಾಯುಕ್ತ ಇಲಾಖೆ ಪೊಲೀಸ್​ ಅಧೀಕ್ಷಕ ಎ.ವಿ.ಲಕ್ಷ್ಮೀನಾರಾಯಣ ಹೇಳಿದರು.

ಕರ್ನಾಟಕ ಲೋಕಾಯುಕ್ತ ಇಲಾಖೆ ವತಿಯಿಂದ ಆರಂಭಿಸಿರುವ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವಿನ ಸಪ್ತಾಹದ ಅಂಗವಾಗಿ ಮಂಗಳವಾರ ತುಮಕೂರು ವಿವಿಯಲ್ಲಿ ಆಯೋಜಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಭ್ರಷ್ಟಾಚಾರದ ವಿರುದ್ಧ ದನಿ ಎತ್ತಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ನೂರುನ್ನಿಸಾ ಮಾತನಾಡಿ, ಜಿಲ್ಲಾ ಕಾರಾಗೃಹದಲ್ಲಿ ಭ್ರಷ್ಟಾಚಾರದ ಮೊಕದ್ದಮೆಯಲ್ಲಿ ಕೆಲ ಸರ್ಕಾರಿ ಅಧಿಕಾರಿಗಳು ಶಿಕ್ಷೆ ಅನುಭವಿಸುತ್ತಿದ್ದಾರೆ. ದುರಾಸೆಯ ಸ್ವಭಾವದಿಂದ ಮನುಷ್ಯನಲ್ಲಿ ನೈತಿಕ ಮೌಲ್ಯಗಳು ಕುಸಿದಿವೆ. ಎಲ್ಲೆಡೆ ಭ್ರಷ್ಟಾಚಾರದ ಬೇರು ವಿಸ್ತಾರವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರಿ ಸೌಲಭ್ಯಗಳಿದ್ದರೂ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗುತ್ತಿರುವುದು ವಿಷಾದನೀಯ. ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿ ಭ್ರಷ್ಟತೆಯನ್ನು ಮೈಗೂಡಿಸಿಕೊಂಡು, ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಹೊಂದಿರುವ ಅಧಿಕಾರಿಗಳಿಗೆ ಕಾನೂನು ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕರ್ನಾಟಕ ಲೋಕಾಯುಕ್ತ ಇಲಾಖೆ ಪೊಲೀಸ್​ ಉಪಾಧೀಕ್ಷಕ ಬಸವರಾಜ್​ ಆರ್​.ಮಗದುಮ್​

ಭ್ರಷ್ಟಾಚಾರದಿಂದ ಆಗುತ್ತಿರುವ ಅನಾಹುತಗಳು, ಸರ್ಕಾರಿ ಉದ್ಯೋಗ ಪಡೆಯಲು ಅರ್ಹ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯ, ಸರ್ಕಾರಿ ಕಚೇರಿಗಲಲ್ಲಿ ನಡೆಯುತ್ತಿರವ ಭ್ರಷ್ಟಾಚಾರ, ಭ್ರಷ್ಟಾಚಾರ ನಿಗ್ರಹಿಸಲು ಕೇಂದ್ರ ಸರ್ಕಾರವು ರಚಿಸಿರುವ ಕೇಂದ್ರ ಜಾಗೃತ ಆಯೋಗ, ಭ್ರಷ್ಟಾಚಾರ ವಿರೋಧಿ ಇಲಾಖೆ ಸಾರ್ವಜನಿಕ ಜಾಗೃತಿ ಹಾಗೂ ಕಾನೂನುಗಳ ಕುರಿತು ತಿಳಿಸಿದರು.

ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್​ ಉಪಾಧೀಕ್ಷಕ ಕೆ.ಜಿ.ರಾಮಕೃಷ್ಣ ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞಾವಿಧಿ ಬೋಧಿಸಿದರು. ವಿವಿ ಕುಲಸಚಿವೆ ನಾಹಿದಾ ಜಮ್​ಜಮ್​, ಇನ್ಸ್​ಪೆಕ್ಟರ್​ ಶಿವರುದ್ರಪ್ಪ ಮೇಟಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net