

ತುಮಕೂರು: ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಆಶ್ರಯ ಪಡೆದಿದ್ದ ಪೋಸ್ಕೋ ಪ್ರಕರಣದಲ್ಲಿ ಸಂತ್ರಸ್ಥ ಅಪ್ರಾಪ್ತ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣವಾಗಿರುವ ಘಟನೆ ಗುರುವಾರ ನಡೆದಿದೆ.
ತುಮಕೂರಿನ ಅಪ್ರಾಪ್ತ ಬಾಲಕಿಯನ್ನು ಇತ್ತೀಚೆಗೆ ಮೈಸೂರಿನಲ್ಲಿ ಪತ್ತೆಯಚ್ಚಿ ಬಾಲಕಿಯ ಬಾಲಮಂದಿರದಲ್ಲಿ ಆಶ್ರಯ ನೀಡಲಾಗಿತ್ತು. ಬುಧವಾರ ಮಧ್ಯಾಹ್ನವಷ್ಟೇ ತುಮಕೂರಿನ ಬಾಲಕಿಯರ ಬಾಲಮಂದಿರಕ್ಕೆ ಕರೆತಂದು ಬಿಡಲಾಗಿತ್ತು.
ನಗರದ ಬಾಲಕಿಯರ ಬಾಲಮಂದಿರದ ಸಿಬ್ಬಂದಿ ಪೋಸ್ಕೋ ಅಪರಾಧ ಪ್ರಕರಣದಲ್ಲಿ ಆರೋಪಿಗಳು ಹಾಗೂ ಅವರ ಸಂಬAಧಿಕರಿಗೆ ಸಂತ್ರಸ್ತ ಬಾಲಕಿಯರನ್ನು ಭೇಟಿ ಮಾಡಲು ಅವಕಾಶ ನೀಡುತ್ತಿರುವ ಬಗ್ಗೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಲಿಖಿತವಾಗಿ ದೂರು ನೀಡಿದೆ.
ಸಿಬ್ಬಂದಿ ಹಾಗೂ ಅಧಿಕಾರಿಗಳು ವಿರುದ್ಧ ಗಂಭೀರವಾದ ಆರೋಪಗಳಿದ್ದರೂ ಕ್ರಮಕೈಗೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿರುವುದು ಇಂತಹ ಘಟನೆಗಳಿಗೆ ಕಾರಣವಾಗುತ್ತಿದೆ ಎನ್ನಲಾಗಿದೆ.
ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.