ಬಸವಾದಿ ಶರಣರ ವೈಭವ ರಥಯಾತ್ರೆ

Basavannanavaru - Copy
Published on

ತುಮಕೂರು: ಬಾಗಲಕೋಟೆ ಜಿಲ್ಲೆ ಕೂಡಲ ಸಂಗಮದಲ್ಲಿ ಏ.29 ಹಾಗೂ 30ರಂದು ಆಯೋಜಿಸಿರುವ ಅನುಭವ ಮಂಟಪ - ಬಸವಾದಿ ಶರಣರ ವೈಭವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸಾಂಸತಿಕ ನಾಯಕ, ವಿಶ್ವ ಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ನಾಡಿನಾದ್ಯಂತ ತಿಳಿಸುವ ನಿಟ್ಟಿನಲ್ಲಿ ಏ.17 ರಿಂದ 29ರವರೆಗೆ ರಥಯಾತ್ರೆ ರಾಜ್ಯದಾದ್ಯಂತ ಸಂಚರಿಸಲಿದೆ.

ಈ ರಥಯಾತ್ರೆ ಏ.19ರಂದು ಮಧ್ಯಾಹ್ನ 1.30ಕ್ಕೆ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗಕ್ಕೆ ಆಗಮಿಸಲಿದ್ದು, ರಥಯಾತ್ರೆಯನ್ನು ಜಿಲ್ಲಾಡಳಿತ ಸ್ವಾಗತಿಸಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net