

ತುಮಕೂರು: ಮುಂಗಾರು ಹಂಗಾಮಿನಲ್ಲಿ ರೈತರು ಸ್ವತಃ ರೈತರ ಬೆಳೆ ಸಮೀಕ್ಷೆ ಆಪ್ ಬಳಸಿ ತಮ್ಮ ಜಮೀನಿನ ಬೆಳೆ ವಿವರ ದಾಖಲಿಸುವ ಬಗ್ಗೆ ಮತ್ತು ಬೆಳೆ ವಿಮೆ ನೋಂದಣಿ ಮಾಡಿಸುವ ಕುರಿತು ಜೂ.24 ರಿಂದ 29ರ ವರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ಪ್ರತಿ ದಿನ ಹೋಬಳಿಗೆ 2 ರಿಂದ 3 ತರಬೇತಿ ಏರ್ಪಡಿಸಲಾಗಿದೆ.
ಗ್ರಾಪಂ ಮಟ್ಟದಲ್ಲಿ ಏರ್ಪಡಿಸುವ ತರಬೇತಿಗಳಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.
ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರಗಳನ್ನು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ.