

ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ-1, ಗ್ರಾಮೀಣ ಉಪವಿಭಾಗ-2, ನಗರ ಉಪವಿಭಾಗ-2ಕ್ಕೆ ಸಂಬಂಧಿಸಿದಂತೆ ಫೆ.15ರಂದು ಮಧ್ಯಾಹ್ನ 3 ರಿಂದ 5.30ರ ವರೆಗೆ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ.
ಕೋರಾ, ಸಿಟಿ ಕೆರೆ, ಬೆಳ್ಳಾವಿ ಶಾಖಾ ವ್ಯಾಪ್ತಿಯ ಗ್ರಾಹಕರಿಗಾಗಿ ಹೊರಪೇಟೆ ವೃತ್ತ ಕೋತಿತೋಪಿನಲ್ಲಿರುವ ಬೆಸ್ಕಾಂ ಗ್ರಾಮೀಣ ಉಪವಿಭಾಗ-1ರ ಕಚೇರಿ; ಭೀಮಸಂದ್ರ ನಗರ ಹಾಗೂ ಹೆಗ್ಗೆರೆ, ಮಲ್ಲಸಂದ್ರ, ದೊಡ್ಡನಾರವಂಗಲ, ಗೂಳೂರು, ಹೆತ್ತೇನಹಳ್ಳಿ, ಹೊಳಕಲ್, ನಾಗವಲ್ಲಿ, ಕಣಕುಪ್ಪೆ, ಗಂಗೋನಹಳ್ಳಿ, ಅರಿಯೂರು, ಹೆಬ್ಬೂರು ಗಳಿಗೇನಹಳ್ಳಿ, ಬಳ್ಳಗೆರೆ, ನಿಡುವಳಲು, ಸಿರಿವರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಹಕರಿಗಾಗಿ ಹೊರಪೇಟೆಯ ಬೆಸ್ಕಾಂ ಉಪವಿಭಾಗ ಕಚೇರಿ; ಎಸ್ಎಸ್ಪುರಂ, ಸರಸ್ವತಿಪುರಂ ಮತ್ತು ಜಯನಗರ ವ್ಯಾಪ್ತಿಯ ಗ್ರಾಹಕರಿಗಾಗಿ ಜಯನಗರದಲ್ಲಿರುವ ನಗರ ಉಪವಿಭಾಗ-2ರ ಕಚೇರಿಯಲ್ಲಿ ಗ್ರಾಹಕರ ಸಂವಾದ ಸಭೆ ನಡೆಯಲಿದೆ.
ಗ್ರಾಹಕರು ಸಭೆಗೆ ಹಾಜರಾಗಿ ದೂರುಗಳಿದ್ದರೆ ಅಧಿಕಾರಿಗಳನ್ನು ಈ ಬಗ್ಗೆ ಪ್ರಶ್ನಿಸಬಹುದು.