

ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ-2ಕ್ಕೆ ಸಂಬಂಧಿಸಿದಂತೆ ಆಗಸ್ಟ್ 16ರಂದು ಮಧ್ಯಾಹ್ನ 3 ರಿಂದ 5.30ರ ವರೆಗೆ
ಹೊರಪೇಟೆ ಬೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ.
ಗ್ರಾಮೀಣ ಉಪವಿಭಾಗ-2ಕ್ಕೆ ಸಂಬಂಧಿಸಿದಂತೆ ಭೀಮಸಂದ್ರ ಹಾಗೂ ಹೆಗ್ಗೆರೆ, ಮಲ್ಲಸಂದ್ರ, ದೊಡ್ಡನಾರವಂಗಲ, ಗೂಳೂರು, ಹೆತ್ತೇನಹಳ್ಳಿ, ಹೊಳಕಲ್, ನಾಗವಲ್ಲಿ, ಕಣಕುಪ್ಪೆ, ಗಂಗೋನಹಳ್ಳಿ, ಅರಿಯೂರು, ಹೆಬ್ಬೂರು ಗಳಿಗೇನಹಳ್ಳಿ, ಬಳ್ಳಗೆರೆ, ನಿಡುವಳಲು, ಸಿರಿವರ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ದೂರುಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು.