

ತುಮಕೂರು: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಡ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಪ್ರಭತ್ವ ಸಾಧಿಸಿರುವ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ತುಮಕೂರಿನಲ್ಲಿ ಸಂಭ್ರಮಿಸಿದರು.
ಭಾನುವಾರ ಫಲಿತಾಂಶ ಘೋಷಣೆಯಲ್ಲಿ ಸ್ಪಷ್ಟ ಬಹುಮತದ ಚಿತ್ರಣ ಹೊರಬಿದ್ದ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದ ಕೂಡಲೇ ನಗರದ ಶಿವಕುಮಾರಸ್ವಾಮೀಜಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿದರು.
ಶಾಸಕ ಬಿ.ಸುರೇಶಗೌಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮುಂಬರುವ 2024ರ ಪಾರ್ಲಿಮೆಂಟ್ ಚುನಾವಣೆಗೆ ಇದೇ ಫಲಿತಾಂಶ ದಿಸ್ಕೂಚಿ ಎನ್ನಿಸಿದೆ. 2019ರ ಚುನಾವಣೆಯಲ್ಲಿ ನಾವು 319 ಸ್ಥಾನದಲ್ಲಿ ಗೆಲುವು ಸಾಧಿಸಿದ್ದು, 2024ರಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಅಂಬಿಕಾ ಹುಲಿನಾಯ್ಕರ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಟಿ.ವೈ.ಯಶಸ್, ಟೂಡಾ ಮಾಜಿ ಅಧ್ಯಕ್ಷ ಬಿ.ಎಸ್.ನಾಗಣ್ಣ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶಿವಪ್ರಸಾದ್, ಪಾಲಿಕೆ ಸದಸ್ಯ ಮಲ್ಲಿಕಾರ್ಜುನಯ್ಯ ಮತ್ತಿತರರು ಇದ್ದರು.