ಅಧಿಕೃತ ಮಾರಾಟಗಾರರಿಂದ ಬಿತ್ತನೆ ಬೀಜ ಖರೀದಿಸಿ

20052020 Kustigi formers mung Seed Sowing
Published on

ತುಮಕೂರು: ರೈತರು ಬಿತ್ತನೆ ಕಾರ್ಯಾರಂಭ ಮಾಡಿರುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ಖರೀದಿಸುವಾಗ ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಡಾ.ರಮೇಶ್ ರೈತರಿಗೆ ಮನವಿ ಮಾಡಿದ್ದಾರೆ.

ಖರೀದಿಸಿದ ಬಿತ್ತನೆ ಬೀಜಕ್ಕೆ ಕಡ್ಡಾಯವಾಗಿ ರಶೀದಿಯನ್ನು ಪಡೆಯಬೇಕು. ಯಾವುದೇ ಕಾರಣಕ್ಕೂ ಅನಾಮಧೇಯ ವ್ಯಕ್ತಿಗಳು ನೇರವಾಗಿ ಬಂದು ಲೂಸ್ ಪ್ಯಾಕೇಟ್‌ಗಳಲ್ಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದಲ್ಲಿ ಅಂತಹ ಬಿತ್ತನೆ ಬೀಜ ಖರೀದಿಸಬಾರದು ಎಂದು ಸಲಹೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net