

ತುಮಕೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜಿಲ್ಲೆಗೆ ಭೇಟಿ ನೀಡಿದಾಗಲೂ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕಮಲ ಪಾಳಯದಲ್ಲಿ ಕಾಣಿಸಿಕೊಳ್ಳದೆ ಕುತೂಹಲ ಮುಂದುವರಿಸಿದರು.
ಬಿ.ವೈ.ವಿಜಯೇAದ್ರ ಅವರ ತಂದೆ ಬಿ.ಎಸ್.ಯಡಿಯೂರಪ್ಪ ಸಮ್ಮಿಶ್ರ ಸರ್ಕಾರವನ್ನು ಕೆಡವಿ ರಾಜ್ಯದ ಮುಖ್ಯಮಂತ್ರಿಯಾಗುವ ಸಂದರ್ಭದಲ್ಲಿ ಜೆಸಿಎಂ ಸದನದಲ್ಲಿ ಏಕಾಂಗಿಯಾಗಿ ಹೋರಾಡಿ ಬಿಎಸ್‌ವೈ ಬಲಗೈ ಭಂಟ ಎನ್ನಿಸಿಕೊಂಡಿದ್ದರು.
ಇದೇ ಕಾರಣಕ್ಕಾಗಿ ಬಿಜೆಪಿ ಸರ್ಕಾರದಲ್ಲಿ ಮಹತ್ವದ ಖಾತೆಗಳನ್ನು ಪಡೆದಿದ್ದ ಮಾಧುಸ್ವಾಮಿ ಕಳೆದ ವಿಭಾನಸಭೆ ಚುನಾವಣೆಯಲ್ಲಿ ಸೋಲು ಕಂಡ ನಂತರ ರಾಜಕೀಯ ಚಟುವಟಿಕೆಗಳಿಂದ ದೂರವಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.