

ತುಮಕೂರು: ಬೆಂಗಳೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳಲ್ಲಿ ಶೇ.60ಕ್ಕಿಂತ ಹೆಚ್ಚಿನ ಅಂಕ ಪಡೆದಿರುವ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಅನುದಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಒಂದು ಜಿಲ್ಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಇಬ್ಬರು ಅಭ್ಯರ್ಥಿಗಳು ಹಾಗೂ ದ್ವಿತೀಯ ಪಿಯುನಲ್ಲಿ ಅತೀ ಹೆಚ್ಚು ಅಂಕ ಪಡೆದ ಒಬ್ಬರನ್ನು ನಗದು ಅನುದಾನಕ್ಕಾಗಿ ಆಯ್ಕೆ ಮಾಡಲಾಗುತ್ತಿದೆ.
ಅರ್ಜಿ ಸಲ್ಲಿಸಲು ನ.20 ಕೊನೆಯ ದಿನ, ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಉಪನಿರ್ದೇಶಕ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಭವನ, ನಂ.-58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು-25 ಇವರಿಗೆ ಸಲ್ಲಿಸಬಹುದು.
ಮಾಹಿತಿಗೆ ದೂ.080 25588718 ಸಂಪರ್ಕಿಸಿ.