16, 17ರಂದು ಕೆಸಿಇಟಿ ಪರೀಕ್ಷೆ

mng-mar20-exam
Published on

ತುಮಕೂರು: ನಗರದ 18, ತಿಪಟೂರಿನ 4 ಹಾಗೂ ಶಿರಾ ನಗರದ 3 ಪರೀಕ್ಷಾ ಕೇಂದ್ರ ಒಟ್ಟು 25 ಕೇಂದ್ರಗಳಲ್ಲಿ ಏ.16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಕೆ.ಸಿಇಟಿ) ಪರೀೆ ನಡೆಯಲಿದ್ದು ಜಿಲ್ಲಾಡಳಿತ ಮುಂಜಾಗ್ರತೆ ವಹಿಸುತ್ತಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್​ ಆದೇಶ ಹೊರಡಿಸಿದ್ದಾರೆ. ಈ ನಿಷೇಧಾಜ್ಞೆ ಏ.16 ಮತ್ತು 17ರಂದು ಬೆಳಗ್ಗೆ 10 ರಿಂದ ಸಂಜೆ 4.30ರ ವರೆಗೆ

ಜಾರಿಯಲ್ಲಿರುತ್ತದೆ.

ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್​ಆಪ್​, ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡಲು ಅವಕಾಶವಿರುವುದರಿಂದ ಪರೀಕ್ಷಾ ಮುಖ್ಯ ಅಧೀಕ್ಷಕರಿಗೆ ಕ್ಯಾಮರಾ ಹೊಂದಿರುವ ಸಾಮಾನ್ಯ ಮೊಬೈಲ್​ ಇರಿಸಿಕೊಳ್ಳಲು ಅವಕಾಶವಿದೆ. ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್​ ತರುವುದು, ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ಅವರ ವಿರುದ್ಧ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net