ಮೃತ ದೇಹವನ್ನು ಬೈಕ್ ನಲ್ಲೆ ಕೊಂಡೊಯ್ದ ಮಕ್ಕಳು

PVG
Published on

ಪಾವಗಡ: ಮೃತದೇಹ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ವೃದ್ಧನ ಮೃತದೇಹವನ್ನು ದಳವಾಯಿಹಳ್ಳಿಗೆ ದ್ವಿಚಕ್ರ ವಾಹನದಲ್ಲಿ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಸಮಾಜವೇ ತಲೆತಗ್ಗಿಸುವ ಘಟನೆ ನಡೆದಿದೆ.

ತಾಲೂಕಿನ ವೈ ಎನ್ ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಮಧ್ಯಾಹ್ನ ಜರುಗಿದೆ

ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ ಹೊನ್ನೂರಪ್ಪ( 80)ವರ್ಷದ ವ್ಯಕ್ತಿ ವೈ ಎನ್ ಹೋಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟಿದ್ದರು, ಮೃತಪಟ್ಟಿರುವ ಹೊನ್ನೂರಪ್ಪ ಶವವನ್ನು ಸಾಗಿಸಲು ಆಂಬುಲೆನ್ಸ್ ಸೇವೆ ಇಲ್ಲದ ಕಾರಣ ದ್ವಿಚಕ್ರ ವಾಹನದಲ್ಲಿಯೇ ಹೊನ್ನೂರಪ್ಪ ಮಕ್ಕಳಾದ ಚಂದ್ರಣ್ಣ ಮತ್ತು ಗೋಪಾಲಪ್ಪ ತಮ್ಮೂರಿಗೆ ತೆಗೆದುಕೊಂಡು ಹೋಗಿದ್ದಾರೆ.

ತಾಲೂಕು ಎಷ್ಟೇ ಹಿಂದುಳಿದರು ಇಂತಹ ನಾಗರೀಕ ಸಮಾಜ ತಲೆ ತಗ್ಗಿಸುವ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿರುವುದು ಒಂದು ರೀತಿ ಆಡಳಿತದ ನಿರ್ಲಕ್ಷ ಕಾರಣವಾಗಿದೆ.

ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಸಕ,ಸಚಿವರುಗಳು ಇಂತಹ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯವಿದೆ ಎಂದು ತಾಲ್ಲೂಕಿನ ಪ್ರಜ್ಣಾವಂತ ನಾಗರೀಕರ ಅಭಿಪ್ರಾಯವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net