

ತುಮಕೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯುಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಪ್ರಥಮ ವರ್ಷದ ಬಿಎ, ಬಿ.ಕಾಂ ಮತ್ತು ಬಿ.ಎಸ್ಸಿ ಪದವಿ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಯುತ ಸಂಯೋಜಿತ ಪದವಿ ಜೊತೆಗೆ ಯುಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸಲು ಜುಲೈ 31 ಕಡೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ವೆಬ್ ಸೈಟ್ https://swdservices.karnataka.gov.in ಸಂಪರ್ಕಿಸಿ.