

ತುಮಕೂರು: ತುಮಕೂರು ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಜ.20ರಂದು ಹಾಗೂ 14 ಪರೀಕ್ಷಾ ಕೇಂದ್ರಗಳಲ್ಲಿ ಜನವರಿ 21ರಂದು ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚಿಸಿರುವ ಗ್ರೂಪ್ ಸಿ ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದೆ.
ಪರೀಕ್ಷೆಯನ್ನು ಯಾವುದೇ ಲೋಪದೋ಼ಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದAತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಜ. 20ರಂದು ಮಧ್ಯಾಹ್ನ 1.30 ರಿಂದ ಸಂಜೆ 4.30ರ ವರೆಗೂ ಮತ್ತು ಜನವರಿ 21ರಂದು ಬೆಳಗ್ಗೆ 9.30 ರಿಂದ ಸಂಜೆ 4.30ರ ವರೆಗೂ ಜಾರಿಯಲ್ಲಿರಲಿದೆ.
.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬAದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ಸೆಕ್ಷನ್ 107 ಮತ್ತು 110ರ ಅಡಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.