ಜಿಲ್ಲೆಯಲ್ಲಿ ಒಂದೇ ದಿನ 18 ಕರೊನಾ ಪ್ರಕರಣ ದೃಢ

COVID_
Published on

ತುಮಕೂರು: ಜಿಲ್ಲೆಯಲ್ಲಿ ಭಾನುವಾರ ಬರೋಬ್ಬರಿ 18 ಜನರಲ್ಲಿ ಕರೊನಾ ಸೋಂಕು ದೃಢವಾಗಿದ್ದು ಮುಂದಿನ ಒಂದು ವಾರದಲ್ಲಿ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಪ್ರಸ್ತುತ ಜಿಲ್ಲೆಯಲ್ಲಿ 26 ಸಕ್ರಿಯ ಪ್ರಕರಣಗಳಿದ್ದು ಇಬ್ಬರಿಗೆ ಜಿಲ್ಲಾಸ್ಪತ್ರೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಕ್ರಿಯ ಪ್ರಕರಣಗಳ ಸಂಪರ್ಕದಲ್ಲಿದ್ದ 84 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಮನೆಯಲ್ಲಿಯೂ ಪ್ರತ್ಯೇಕವಾಗಿಡಲಾಗಿದೆ.

ಭಾನುವಾರ ಗುಬ್ಬಿ, ಪಾವಗಡ ತಾಲೂಕಿನಲ್ಲಿ ತಲಾ 4, ತುಮಕೂರು, ಕುಣಿಗಲ್, ಕೊರಟಗೆರೆಯಲ್ಲಿ ತಲಾ 3, ಶಿರಾ ತಾಲೂಕಿನಲ್ಲಿ ಒಬ್ಬರಿಗೆ ಕರೊನಾ ಕಾಣಿಸಿಕೊಂಡಿದ್ದು ಜನರು ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ಮಧುಮೇಹ, ಅಧಿಕರಕ್ತದ ಒತ್ತಡ, ಜ್ವರ, ಕೆಮ್ಮು, ಶೀತ ಇತರೆ ರೋಗ ಲಕ್ಷಣಗಳು ಇದ್ದಲ್ಲಿ ಕೂಡಲೇ ತಕ್ಷಣದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳಬೇಕು ಅಥವಾ ದೂ.0816 2278387, 104 ಸಹಾಯವಾಣಿಗೆ ಕರೆ ಮಾಡಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net