

ತುಮಕೂರು: ಲೋಕಸಭಾ ಚುನಾವಣೆ ಮತ ಎಣಿಕೆ ಜೂ.4ರಂದು ನಗರದ ತುಮಕೂರು ವಿವಿವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‌ನಲ್ಲಿ ನಡೆಯಲಿದ್ದು, ಎಣಿಕಾ ಕೇಂದ್ರಕ್ಕೆ 3 ಸುತ್ತಿನ ಭದ್ರತೆ ಒದಗಿಸಲಾಗಿದೆ.
ಎಣಿಕೆ ಪ್ರಕ್ರಿಯೆ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಎಣಿಕಾ ಕೇಂದ್ರದ ಆವರಣದ ಸುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ವಾಹನ ನಿರ್ಬಂಧಿಸಿ ಪಾದಚಾರಿ ವಲಯವೆಂದು ಗುರುತಿಸಿ ಮೊದಲ ಸುತ್ತಿನ ಭದ್ರತೆ ಒದಗಿಸಲಾಗಿದೆ.
2ನೇ ಸುತ್ತಿನಲ್ಲಿ ರಾಜ್ಯ ಪೊಲೀಸ್ ಹಾಗೂ 3ನೇ ಸುತ್ತಿನಲ್ಲಿ ಕೇಂದ್ರ ಸಶಸ್ತç ಪೊಲೀಸ್ ಪಡೆಯಿಂದ ಭದ್ರತೆ ಒದಗಿಸಲು ಜಿಲ್ಲಾಡಳಿತ ಕ್ರಮಕೈಗೊಂಡಿದೆ.
ತುಮಕೂರು ಲೋಕಸಭಾ ಕ್ಷೇತ್ರದ 1846 ಮತಗಟ್ಟೆಗಳ ಮತಗಳ ಎಣಿಕೆಗಾಗಿ 12 ಎಣಿಕಾ ಕೊಠಡಿ ಹಾಗೂ 121 ಎಣಿಕಾ ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಮತ ಎಣಿಕಾ ಕೊಠಡಿಗಳಲ್ಲಿಯೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.