

ತುಮಕೂರು: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ ವೀಕ್ಷಣೆಗೆ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ದೊಡ್ಡ ಪರದೆ ಅಳವಡಿಸಲಾಗಿದ್ದು ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ.
20 ಸಾವಿರಕ್ಕೂ ಹೆಚ್ಚು ಜನರು ಕುಳಿತು ಪಂದ್ಯ ವೀಕ್ಷಿಸಲು ಸೌಲಭ್ಯವಿರುವ ಸುಸಜ್ಜಿತ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನದಿಂದಲೇ ಪಂದ್ಯ ವೀಕ್ಷಣೆಗೆ ಅವಕಾಶವಿದ್ದು ಕ್ರಿಕೆಟ್ ಹಬ್ಬದ ಸಂಭ್ರಮ ಹೆಚ್ಚಿಸಲಿದೆ.
ದೊಡ್ಡ ಪರದೆ ಅಳವಡಿಸಲು ಸರ್ಕಾರದಿಂದಲೇ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಗೆ ಸೂಚನೆ ಬಂದಿದ್ದು ಸೂಕ್ತ ಭದ್ರತೆಯಲ್ಲಿ ಪಂದ್ಯ ವೀಕ್ಷಣೆಗೆ ಸಕಲ ಸಿದ್ಧತೆ ನಡೆದಿದೆ.