

ತುಮಕೂರು: ಮಗಳ ಮೇಲೆ ಬಲಾತ್ಕಾರದಿಂದ ಅತ್ಯಾಚಾರ ಎಸಗಿದ್ದ ಆರೋಪಿ ಚಿಕ್ಕಪ್ಪನಿಗೆ 30 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತುಮಕೂರಿನ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ.
ತಾಲೂಕಿನ ಮೇಣಸಂದ್ರದ ರಾಕೇಶ ಅಲಿಯಾಸ್ ಧನಂಜಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣ 2020ರಲ್ಲಿ ತುಮಕೂರು ಮಹಿಳಾ ಠಾಣೆಯಲ್ಲಿ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಸಿಪಿಐ ಟಿ.ಎಸ್.ರಾಧಾಕೃಷ್ಣ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕಿ ಕೆ.ಎಸ್.ಆಶಾ ವಾದ ಮಂಡಿಸಿದ್ದರು.