

ತುಮಕೂರು: ದಸರಾ ಉತ್ಸವ ಅಂಗವಾಗಿ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1ರ ವರೆಗೆ ವಿವಿಧ ಕ್ರೀಡಾಕೂಟ ್ನ ಏರ್ಪಡಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ.
ದಸರಾ ಕ್ರೀಡಾಕೂಟ ಸೆಪ್ಟೆಂಬರ್ 27ರಂದು ಬೆಳಗ್ಗೆ 8ಕ್ಕೆ ೆ ತುಮಕೂರು ವಿಶ್ವವಿದ್ಯಾನಿಲಯ ಆವರಣದಲ್ಲಿರುವ ಟೆನ್ನಿಸ್ ಕೋರ್ಟ್ನಲ್ಲಿ ಟೆನ್ನಿಸ್, ಸೆಪ್ಟೆಂಬರ್ 27 ಹಾಗೂ 28ರಂದು ಬೆಳಗ್ಗೆ 9 ಗಂಟೆಗೆ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಶೂಟಿಂಗ್, ಸೆಪ್ಟೆಂಬರ್ 28ರಂದು ಬೆಳಗ್ಗೆ 7 ಕ್ಕೆ ಜೂನಿಯರ್ ಕಾಲೇಜು ಮೈದಾನದಲ್ಲಿ ಮ್ಯಾರಥಾನ್ ಹಾಗೂ ಬೆಳಗ್ಗೆ 9.30 ಗಂಟೆಗೆ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಾಡಕುಸ್ತಿ ಏರ್ಪಡಿಸಲಾಗಿದೆ.
ಸೆಪ್ಟೆಂಬರ್ 30ರಂದು ಬೆಳಗ್ಗೆ 9 ಗಂಟೆಗೆ ಮಹಾತ್ಮಗಾಂಧಿ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಚೆಸ್, ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಕಬ್ಬಡ್ಡಿ ಹಾಗೂ ಬೆಳಗ್ಗೆ 9 ಗಂಟೆಗೆ ಪುಟ್ಟಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಜಿಮ್ನಾಸ್ಟಿಕ್ಸ್, ಅಕ್ಟೋಬರ್ 1ರಂದು ಬೆಳಗ್ಗೆ 9 ಗಂಟೆಗೆ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಖೋಖೋ ಮತ್ತು ವಾಲಿಬಾಲ್ ಕ್ರೀಡಾಕೂಟ ಏರ್ಪಡಿಸಲಾಗಿದೆ.