

ತುಮಕೂರು: ಜಿಲ್ಲಾಡಳಿತದ ವತಿಯಿಂದ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.26 ಮತ್ತು 27ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಏರ್ಪಡಿಸಲಾಗಿದೆ.
ಸೆ.26ರಂದು ಪುರುಷರು ಹಾಗೂ ಸೆ.27ರಂದು ಮಹಿಳೆಯರಿಗಾಗಿ ಸ್ಫರ್ಧೆಗಳನ್ನು ಏರ್ಪಡಿಸಲಾಗಿದೆ. ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್ಬಾಲ್, ಥ್ರೋಬಾಲ್, ಯೋಗ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ, ಅಥ್ಲೆಟಿಕ್ಸ್ ವಿಭಾಗದಲ್ಲಿ ಪ್ರಥಮ ಹಾಗೂ ದ್ವೀತಿಯ ಸ್ಥಾನ ಗಳಿಸಿದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರು.
ಕ್ರೀಡಾಪಟುಗಳು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವ ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್ಬಾಲ್, ಟೇಬಲ್ ಟೆನ್ನಿಸ್, ಬ್ಯಾಸ್ಕೆಟ್ಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ, ಟೆನ್ನಿಸ್, ನೆಟ್ಬಾಲ್, ಈಜು ಕ್ರೀಡೆಗಳಲ್ಲಿ ಭಾಗವಹಿಸಬಹುದು.