

ತುಮಕೂರು: ದಸರಾ ಉತ್ಸವ ಅಂಗವಾಗಿ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1ರ ವರೆಗೆ ವಿವಿಧ ಕ್ರೀಡಾಕೂಟ ಏರ್ಪಡಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ.
ದಸರಾ ಕ್ರೀಡಾಕೂಟ ಸೆಪ್ಟೆಂಬರ್ 27ರಂದು ಬೆಳಗ್ಗೆ 8ಕ್ಕೆ ತುಮಕೂರು ವಿಶ್ವವಿದ್ಯಾಲಯ ಆವರಣದಲ್ಲಿರುವ ಟೆನಿಸ್ ಕೋರ್ಟ್ನಲ್ಲಿ ಟೆನಿಸ್, ಸೆ.27 ಹಾಗೂ 28ರಂದು ಬೆಳಗ್ಗೆ 9 ಗಂಟೆಗೆ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಶೂಟಿಂಗ್, ಸೆಪ್ಟೆಂಬರ್ 28ರಂದು ಬೆಳಗ್ಗೆ 7 ಕ್ಕೆ ಜೂನಿಯರ್ ಕಾಲೇಜು ಮೈದಾನದಲ್ಲಿ ಮ್ಯಾರಥಾನ್ ಹಾಗೂ ಬೆಳಗ್ಗೆ 9.30 ಗಂಟೆಗೆ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಾಡಕುಸ್ತಿ ಏರ್ಪಡಿಸಲಾಗಿದೆ.
ಸೆ. 30ರಂದು ಬೆಳಗ್ಗೆ 9 ಗಂಟೆಗೆ ಮಹಾತ್ಮಗಾಂಧಿ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಚೆಸ್, ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಕಬಡ್ಡಿ ಹಾಗೂ ಬೆಳಗ್ಗೆ 9 ಗಂಟೆಗೆ ಪುಟ್ಟಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಜಿಮ್ನಾಸ್ಟಿಕ್ಸ್, ಅಕ್ಟೋಬರ್ 1ರಂದು ಬೆಳಗ್ಗೆ 9 ಗಂಟೆಗೆ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಖೋಖೋ ಮತ್ತು ವಾಲಿಬಾಲ್ ಕ್ರೀಡಾಕೂಟ ಏರ್ಪಡಿಸಲಾಗಿದೆ.