132332 ರೈತರ ಖಾತೆಗೆ 74 ಕೋಟಿ ರೂ. ಬರಪರಿಹಾರ

BARA
Published on

ತುಮಕೂರು: ಜಿಲ್ಲೆಯ 132332 ರೈತರ ಖಾತೆಗೆ 74 ಕೋಟಿ ರೂ.ಗಳ ಬರ ಪರಿಹಾರ ಹಣವನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಾಲೂಕು ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿ, ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ 15975 ರೈತರಿಗೆ 92823283 ರೂ., ಗುಬ್ಬಿಯ 8234 ರೈತರಿಗೆ 41029295 ರೂ., ಕೊರಟಗೆರೆ-12144 ರೈತರಿಗೆ 72813925 ರೂ., ಕುಣಿಗಲ್-19022 ರೈತರಿಗೆ 96453201 ರೂ., ಮಧುಗಿರಿ-15548 ರೈತರಿಗೆ 89783195 ರೂ., ಪಾವಗಡ-5641 ರೈತರಿಗೆ 42583561 ರೂ., ಶಿರಾ-17013 ರೈತರಿಗೆ 111928237 ರೂ., ತಿಪಟೂರು-14955 ರೈತರಿಗೆ 77865493 ರೂ., ತುಮಕೂರು-11004 ರೈತರಿಗೆ 52055965 ರೂ. ಹಾಗೂ ತುರುವೇಕೆರೆ ತಾಲೂಕಿನ 12796 ರೈತರಿಗೆ 64809796 ರೂ. ಸೇರಿದಂತೆ 132332 ರೈತರಿಗೆ 742145951 ರೂ.ಗಳ ಬರ ಪರಿಹಾರವನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬರ ಪರಿಹಾರ ಹಣವನ್ನು ಖಾತೆಗೆ ಜಮೆ ಮಾಡಿದ ರೈತರ ಪಟ್ಟಿಯ ವಿವರವನ್ನು ಜಿಲ್ಲಾಧಿಕಾರಿಗಳ ಕಚೇರಿ ಜಾಲತಾಣ, ಎಲ್ಲ ತಾಲೂಕು ಕಚೇರಿ, ಗ್ರಾಮ ಪಂಚಾಯತಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಚುರಪಡಿಸಬೇಕೆಂದು ಸೂಚನೆ ನೀಡಿದರು. ಖಾತೆಗೆ ಬರ ಪರಿಹಾರದ ಹಣ ಜಮೆಯಾಗದ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಫ್ರೂಟ್ ಐಡಿ ಹಾಗೂ ಆಧಾರ್ ಸಂಖ್ಯೆಯೊAದಿಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net