ದೇವರಾಯನದುರ್ಗದಲ್ಲಿ `ಸ್ವಚ್ಛತಾ ಹೀ ಸೇವಾ'; ಕಸ ಬಾಚಿದ ಡಿಸಿ, ಸಿಇಒ

DC_CEO
Published on

ತುಮಕೂರು: ಕೈಗವಸು ತೊಟ್ಟು, ಕುಡುಗೋಲು ಹಿಡಿದು ಕಲ್ಯಾಣಿ ಸುತ್ತ ಬೆಳೆದಿದ್ದ ಗಿಡ-ಗಂಟೆಗಳನ್ನು ಕತ್ತರಿಸಿ ಸ್ವಚ್ಛಗೊಳಿಸುವ ಶ್ರಮದಾನದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ ತೊಡಗಿದ್ದು ಕಾಲೇಜು ವಿದ್ಯಾರ್ಥಿಗಳ ಎನ್‌ಎಸ್‌ಎಸ್ ಕ್ಯಾಂಪ್ ನೆನಪಿಸುವಂತಿತ್ತು.

ತಾಲೂಕಿನ ದೇವರಾಯನ ದುರ್ಗದ ಇತಿಹಾಸ ಪ್ರಸಿದ್ಧ ಶ್ರೀಭೋಗ ನರಸಿಂಹಸ್ವಾಮಿ ಸುಕ್ಷೇತ್ರದಲ್ಲಿ ಗುರುವಾರ ಇಡೀ ಜಿಲ್ಲಾಡಳಿತ ಪ್ರತ್ಯಕ್ಷವಾಗಿತ್ತು.

ಸ್ವಚ್ಛತಾ ಸೇವಾ ಆಂದೋಲನ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಕಲ್ಯಾಣಿಯನ್ನು ಸ್ವಚ್ಛಗೊಳಿಸುವ ಶ್ರಮದಾನದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದು ಎಲ್ಲರೂ ಅತ್ಯುತ್ಸಾಹದಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ದೇಶನದನ್ವಯ ಜಿಲ್ಲಾದ್ಯಂತ ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 2ರ ವರೆಗೆ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜನರಲ್ಲಿ ಸ್ವಚ್ಛತೆಯ ಜವಾಬ್ದಾರಿ ಮೂಡಿಸುವುದು ಈ ಶ್ರಮದಾನ ಕಾರ್ಯಕ್ರಮದ ಮುಖ್ಯ ಉದ್ದೇಶ. ಈ ಕಾರ್ಯಕ್ರಮದಡಿ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದೆ. ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾದ ಪ್ರದೇಶಗಳಲ್ಲಿ ಯಥಾರೀತಿ ನೈರ್ಮಲ್ಯತೆ ಕಾಪಾಡಿಕೊಂಡು ಸ್ವಚ್ಛಗ್ರಾಮ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ,
ವೈ.ಎಸ್.ಪಾಟೀಲ
ಜಿಲ್ಲಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net