ಜಿಲ್ಲಾಧಿಕಾರಿಗೆ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ

application
Published on

ತುಮಕೂರು: ಜಿಲ್ಲೆಯ ಕಂದಾಯ ಇಲಾಖೆಯ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬAಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ಕಾನೂನು ಸಲಹೆಗಾರ(ಕಾನೂನು ಕೋಶ)ರ ಹುದ್ದೆಯನ್ನು ಭರ್ತಿ ಮಾಡಲು ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಸಿವಿಲ್ ನ್ಯಾಯಾಧೀಶರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ತಮ್ಮ ವೈಯಕ್ತಿಕ ಮಾಹಿತಿಯ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜು.8ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು.

ಆಯ್ಕೆಯಾದವರಿಗೆ ಸರ್ಕಾರದ ಆದೇಶದನ್ವಯ ಮಾಸಿಕ ಸಂಚಿತ ವೇತನ ಪಾವತಿಸಲಾಗುವುದು. ಆಯ್ಕೆಯ ವಿಚಾರದಲ್ಲಿ ಜಿಲ್ಲಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿದ್ದು, ಯಾವುದೇ ವ್ಯಾಜ್ಯ ತಕರಾರುಗಳಿಗೆ ಅವಕಾಶವಿರುವುದಿಲ್ಲವೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net