

ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ಕ್ಕೆ ಸಂಬಂಧಿಸಿದಂತೆ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಆಗಸ್ಟ್ 21ರೊಳಗಾಗಿ ಮನೆಮನೆಯ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಮಾತನಾಡಿದರು.
ಭಾರತ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಪರಿಷ್ಕರಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಆಯಾ ಬಿಎಲ್‌ಒಗಳು ಆಗಸ್ಟ್ 21ರೊಳಗಾಗಿ ತಮ್ಮ ಮತಗಟ್ಟೆ ವ್ಯಾಪ್ತಿಯ ಮನೆ-ಮನೆಗೆ ತೆರಳಿ ಸಮೀಕ್ಷೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಪಂ ಸಿಇಒ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಉಪವಿಭಾಗಾಧಿಕಾರಿ ಗೌರವ್‌ಕುಮಾರ್‌ಶೆಟ್ಟಿ, ಚುನಾವಣಾ ತಹಸೀಲ್ದಾರ್ ಗೌರಮ್ಮ, ಪಾಲಿಕೆ ವಲಯ ಆಯುಕ್ತ ನಾಗಭೂಷಣ್, ತಹಸೀಲ್ದಾರ್ ಸಿದ್ದೇಶ್ ಮತ್ತಿತರರು ಇದ್ದರು.