

ತುಮಕೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಆಗಮಿಸಿ ಸ್ವಾಗತಿಸದ ಬಗ್ಗೆ ತರಹೇವಾರಿ ಚರ್ಚೆಗಳು ಆರಂಭವಾಗಿವೆ.
ಎತ್ತಿನಹೊಳೆ ನೀರಾವರಿ ಯೋಜನೆಯ ಭೂಸ್ವಾಧಿನ ಕಾರ್ಯವನ್ನು ತ್ವರಿತವಾಗಿ ಪ್ರಗತಿ ಸಾಧಿಸಿದ ಸಲುವಾಗಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಸಾರಿಗೆ ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಹರ್ಷ ಮೆಲ್ಹೋತ್ರ ಅವರಿಂದ ತುಮಕೂರು ಜಿಲ್ಲಾಧಿಕಾರಿ ಸ್ವೀಕರಿಸಿದ್ದ " ಐಐಎನ್ಐ&2025' ಪ್ರಶಸ್ತಿ ಸ್ವೀಕರಿಸಿದ್ದು ಡಿ.ಕೆ.ಶಿವಕುಮಾರ್ ಕೆಂಗಣ್ಣಿಗೆ ಗುರಿಯಾಗಿದೆ ಎನ್ನಲಾಗಿದೆ.
ನೀರಾವರಿ ಇಲಾಖೆಗಳ ಶ್ರಮದಿಂದ ತ್ವರಿತ ಸಾಧನೆ ಮಾಡಿದ್ದರೂ ಜಿಲ್ಲಾಧಿಕಾರಿ ಸಚಿವರ ಗಮನಕ್ಕೂ ತರದೆ ಉತ್ತರ ಪ್ರದೇಶದ ಗಾಝಿಯಾಬಾದ್ ಮೂಲದ ಎನ್ಜಿಒ ಕೊಟ್ಟ ಪ್ರಶಸ್ತಿ ಸ್ವೀಕರಿಸಿರುವುದಕ್ಕೆ ಇಂಜಿನಿಯರ್ಗಳು ಡಿಕೆಶಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಆದರೆ, ಜಿಲ್ಲಾಧಿಕಾರಿ ದೆಹಲಿಗೆ ಭೇಟಿ ನೀಡಿದ್ದು ಜಿಲ್ಲೆಯಲ್ಲಿರಲಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ.