

ತುಮಕೂರು: ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಿವಿಲ್ ಬಸ್ ನಿಲ್ದಾಣದ ಮುಂಭಾಗದಲ್ಲಿ ಅಸ್ವಸ್ಥಗೊಂಡಿದ್ದ ಸುಮಾರು 60 ವರ್ಷದ ವ್ಯಕ್ತಿ ಜೂ.17ರಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಠಾಣೆಯಲ್ಲಿ ದೂರು ದಾಖಲಾಗಿದೆ.
ಮೃತನು 175 ಸೆಂ.ಮೀ. ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮೃತನ ಮೈಮೇಲೆ ಕೆಂಪು ಬಣ್ಣದ ತುಂಬು ತೋಳಿನ ಟೀ ಷರ್ಟ್ ಇರುತ್ತದೆ.
ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೂ.0816-2278388, ಮೊ.9480802930-45 ಸಂಪರ್ಕಿಸಿ.