

ತುಮಕೂರು: ವಿವಿಧ ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಗರದ 10 ಪರೀಕ್ಷಾ ಕೇಂದ್ರಗಳಲ್ಲಿ ನ.18 ಮತ್ತು 19ರಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಎಂದು ಘೋಷಿಸಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶಿಸಿದ್ದಾರೆ.
ಈ ನಿಷೇಧಾಜ್ಞೆ ನ.18 ಮತ್ತು 19ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೂ ಜಾರಿಯಲ್ಲಿರಲಿದೆ.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬAದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಕರ್ನಾಟಕ ರಾಜ್ಯ ವಿದ್ಯುನ್ಮಾನ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.