ಹೊಸ ವರ್ಷಾಚರಣೆಗೆ ಜಿಲ್ಲಾಡಳಿತದ ಮಾರ್ಗಸೂಚಿ; ಎಲ್ಲಿಗೆ ಪ್ರವೇಶ ನಿರ್ಬಂಧ? ಸ್ಥಳೀಯರಿಗೆ ನೀಡಿದ ಸೂಚನೆಗಳೇನು?

DC_PY_SHIVANAGOWDA1
Published on

ತುಮಕೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರ ಬೆಳಗ್ಗೆ 8ರಿಂದ 2023ರ ಜ.2ರ ಬೆಳಗ್ಗೆ 8ರ ವರೆಗೆ ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರ ವಾಹನಗಳ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

2023ರ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು, ಪ್ರವಾಸಿಗರು ಭೇಟಿ ನೀಡಲಿದ್ದು, ಸಂಭ್ರಮಾಚರಣೆ ಸಮಯದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವ ಸಂಭವಗಳು ಇರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕರು ಮದ್ಯಪಾನ ಮಾಡಿ ಹಾಗೂ ಜಾಲಿರೈಡ್ ನೆಪದಲ್ಲಿ ವಾಹನಗಳನ್ನು ಚಾಲನೆ ಮಾಡುವುದರಿಂದ ಮಾರಣಾಂತಿಕ ರಸ್ತೆ ಅಪಘಾತ ಸಂಭವಿಸುವ ಹಾಗೂ ಈ ಪ್ರದೇಶಗಳು ಸುರಕ್ಷಿತ ಅರಣ್ಯ ಆವೃತ ಪ್ರದೇಶಗಳಾಗಿದ್ದು, ಪ್ರವಾಸಿಗರ ಮೇಲೆ ಕಾಡು ಪ್ರಾಣಿಗಳು ದಾಳಿ ಮಾಡುವ ಸಾಧ್ಯತೆಯಿದೆ.

ಆದರೆ, ನಿರ್ಬಂಧಿತ ಅವಧಿಯಲ್ಲಿ ಮೇಲ್ಕಾಣಿಸಿದ ಮಾರ್ಗವಾಗಿ ದೈನಂದಿನ ಚಟುವಟಿಕೆಗಳಿಗೆ ತೆರಳುವ ಸ್ಥಳೀಯರು ಸದರಿ ಮಾರ್ಗಮಧ್ಯೆ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸದಂತೆ ತೆರಳಲು ಅನುಮತಿ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net