ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

mahatma gandhiji
Published on

ತುಮಕೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ತಿಳಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಶಾಲಾ,-ಕಾಲೇಜುಗಳಲ್ಲಿ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.

ಎಂದು ಜಿಪಂ ಸಿಇಒ ಜಿ.ಪ್ರಭು ಜಿಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಈ ಬಗ್ಗೆ ಪೂರ್ವ ಭಾವಿ ಸಭೆ ನಡೆಸಿ ಸ್ಫರ್ಧೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಹಿರಿಯ ಸಹಾಯಕ ನಿರ್ದೇಶಕ ಜಿ.ಹಿಮಂತರಾಜು ಮಾತನಾಡಿ, ಪ್ರಬಂಧ ಸ್ಪರ್ಧೆ ಕುರಿತು ರೂಪು-ರೇಷೆಗಳ ಬಗ್ಗೆ ಮಾಹಿತಿ ನೀಡಿ, ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ 3 ಪ್ರಬಂಧ ರಚನೆಕಾರರಿಗೆ ಅ.2ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಗೌರವಿಸಲಾಗುವುದು. ಜಿಲ್ಲಾ ಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯ ಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ಆಯ್ಕೆಯಾದವರಿಗೆ ರಾಜ್ಯ ಮಟ್ಟದಲ್ಲಿ ನಗದು ಬಹುಮಾನ ನೀಡಲಾಗುವುದು ಎಂದರು.

ಹೈಸ್ಕೂಲ್​, ಪಿಯು ಹಾಗೂ ಪದವಿ, ಸ್ನಾತಕೋತ್ತರ ಮೂರು ಪ್ರತ್ಯೇಕ ವಿಭಾಗಗಳ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ 3000 ರೂ., ದ್ವೀತಿಯ ಸ್ಥಾನಕ್ಕೆ 2000 ರೂ., ತೃತೀಯ ಸ್ಥಾನಕ್ಕೆ 1000 ರೂ. ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ 31000 ರೂ., ದ್ವೀತಿಯ ಸ್ಥಾನಕ್ಕೆ 21000 ರೂ. ಹಾಗೂ ತೃತೀಯ ಸ್ಥಾನಕ್ಕೆ 11000 ರೂ. ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net