ತುಮಕೂರಿಗೆ ಆಗಮಿಸಿದ ಕೇಂದ್ರ ಬರ ಅಧ್ಯಯನ ತಂಡ

BARA
Published on

ತುಮಕೂರು: ಕೇಂದ್ರದಿಂದ ಆಗಮಿಸಿರುವ ಕೇಂದ್ರ ಜಲ ಆಯೋಗದ ನಿರ್ದೇಶಕ ವಿ.ಅಶೋಕ್‌ಕುಮಾರ್ ನೇತೃತ್ವದ ಬರ ಅಧ್ಯಯನ ತಂಡ ಕೊರಟಗೆರೆ ತಾಲೂಕು ಅರಸಾಪುರ ಮೂಲಕ ಜಿಲ್ಲೆಗೆ ಪ್ರವೇಶಿಸಿತು.

ತಂಡದಲ್ಲಿ ಎಂಎನ್‌ಸಿಎಫ್‌ಸಿಯು ಉಪನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪ ಕಾರ್ಯದರ್ಶಿ ಸಂಗೀತ್‌ಕುಮಾರ್ ಹಾಗೂ ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರ ಡಾ.ಶ್ರೀನಿವಾಸರೆಡ್ಡಿ ಇದ್ದು ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಪಂ‌ ಸಿಇಒ ಜಿ.ಪ್ರಭು ಅವರನ್ನು ಸ್ವಾಗತಿಸಿದರು.

ಮಧುಗಿರಿ ಪ್ರವಾಸಿ ಮಂದಿರದಲ್ಲಿ ಕೇಂದ್ರ ತಂಡಕ್ಕೆ ಜಿಲ್ಲೆಯ ಬರಪರಿಸ್ಥಿತಿ ಬಗ್ಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ಜಿಲ್ಲೆಯ 10 ತಾಲೂಕುಗಳ ಬರದ ಚಿತ್ರಣವನ್ನು ಬಿಡಿಸಿಡಲಿದ್ದಾರೆ.

ಬೈರನಹಳ್ಳಿಯಲ್ಲಿ ರೈತ ನಾಗೇಂದ್ರಕುಮಾರ್ ಅವರ ಜಮೀನಿನಲ್ಲಿ ನೀರಿಲ್ಲದ ಒಣಗಿದ್ದ ಶೇಂಗಾ ಬೆಳೆ ವೀಕ್ಷಿಸಿದರು. ಭಾಗ್ಯಮ್ಮ ಅವರ ಜಮೀನಿನಲ್ಲಿಯೂ ಒಣಗಿದ ಬೆಳೆ ಕಂಡು ಅಧಿಕಾರಿಗಳು ಮರುಗಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net