ಕಾಂಗ್ರೆಸ್ ತೊರೆದ ಮಾಜಿ ಶಾಸಕ ಕಮಲ ಪಾಳಯಕ್ಕೆ ಸೇರ್ಪಡೆ

MDL
Published on

ತುಮಕೂರು: ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಶನಿವಾರ ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ `ಜನೋತ್ಸವ'ದಲ್ಲಿ ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ.

ಈ ಹಿಂದೆ ಬಿಜೆಪಿಯಿಂದಲೇ ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರೂ ಆಗಿದ್ದ ಎಂ.ಡಿ.ಲಕ್ಷ್ಮೀನಾರಾಯಣ ಕಾಂಗ್ರೆಸ್‌ಗೆ ಇತ್ತೀಚೆಗಷ್ಟೇ ರಾಜೀನಾಮೆ ನೀಡಿದ್ದರು. ಈಗ ಮಾತೃಪಕ್ಷಕ್ಕೆ ವಾಪಸಾಗುತ್ತಿದ್ದು ತುರುವೇಕೆಯಲ್ಲಿ ಬಿಜೆಪಿಗೆ ಬಲ ಬಂದಂತಾಗಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅನಿಲ್‌ಕುಮಾರ್ ಕೂಡ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net