

ತುಮಕೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದ 2683 ಮತಗಟ್ಟೆಗಳಲ್ಲಿ ಚುನಾವಣೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ.
ಚುನಾವಣೆ ಸಂದರ್ಭದಲ್ಲಿ ಕಾರ್ಯನಿರ್ವಹಿಸಬೇಕಾದ ಫ್ಲೆÊಯಿಂಗ್ ಸ್ಕಾö್ವಡ್, ವಿಡಿಯೋ ವೀಕ್ಷಣಾ ತಂಡ, ಸ್ಟಾö್ಯಟಿಕ್ ತಂಡ, ಚುನಾವಣಾ ವೆಚ್ಚದ ತಂಡ, ಸೆಕ್ಟರ್ ಅಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿಗಾಗಿ ಸೋಮವಾರ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಚುನಾವಣಾ ತರಬೇತಿ ಕೂಡ ನಡೆಯಿತು.
ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾತನಾಡಿ, ಚುನಾವಣಾ ಕರ್ತವ್ಯಕ್ಕೆ ನೇಮಕವಾಗುವ ಅಧಿಕಾರಿ ಹಾಗೂ ಸಿಬ್ಬಂದಿಗಳು ಯಾವುದೇ ನೆಪ ಹೇಳಿ ಗೈರು ಹಾಜರಾಗದೆ, ಕಡ್ಡಾಯವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ರಾಹುಲ್‌ಕುಮಾರ್ ಶಹಪೂರವಾಡ್ ಮಾತನಾಡಿ, ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಸಂಪನ್ಮೂಲ ವ್ಯಕ್ತಿಗಳಾದ ಜಿ.ವಿ.ಗೋಪಾಲ್, ರಿಜ್ವಾನ್ ಪಾಷ, ವೇದಮೂರ್ತಿ, ಎಚ್.ಬಿ.ಗಂಗಾಧರ್ ಅಧಿಕಾರಿಗಳಿಗೆ ಚುನಾವಣಾ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿಗಳಾದ ಕಲ್ಪಶ್ರೀ, ರಿಷಿ ಆನಂದ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮರಿಯಪ್ಪ, ಜಿಪಂ ಉಪಕಾರ್ಯದರ್ಶಿ ಅತೀಕ್ ಮತ್ತಿತರರು ಇದ್ದರು.