ಪದವೀಧರರಿಗೆ ಉದ್ಯಮಶೀಲತಾ ತರಬೇತಿ

Application-1-1280x720
Published on

ತುಮಕೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಬೆಂಗಳೂರಿನ ಐಐಎಂ ಸಂಸ್ಥೆ ಮೂಲಕ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಇಲಾಖೆಯ ಅಧಿಕೃತ ಜಾಲತಾಣ www.sw.kar.nic.in ಆನ್‌ಲೈನ್ ಮೂಲಕ ಜ.31ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಿ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿಗೆ ಸೇರಿದ್ದು, 21 ರಿಂದ 45 ವರ್ಷ ವಯೋಮಿತಿಯೊಳಗಿನವರಾಗಿರಬೇಕು ಹಾಗೂ ರಾಜ್ಯದ ನಿವಾಸಿಯಾಗಿರಬೇಕು. ಉದ್ಯಮಗಳನ್ನು ಸ್ಥಾಪಿಸುವ ಉz್ದೆÃಶವಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು.

ತರಬೇತಿ 5 ರಿಂದ 8 ತಿಂಗಳ ಅವಧಿಯದ್ದಾಗಿದ್ದು, 8 ದಿನದ ತರಬೇತಿಯನ್ನು ಐಐಎಂ. ಸಂಸ್ಥೆ ಕ್ಯಾಂಪಸ್‌ನಲ್ಲಿ ನೀಡಲಾಗುವುದು. ಫೆಬ್ರವರಿ 11ರಂದು ನಡೆಸುವ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net