ಮಾಜಿ ಶಾಸಕ ಎಸ್.ಷಫೀ ಅಹ್ಮದ್ ಘರ್ ವಾಪಸ್ಸಿ!

25555555
Published on

ತುಮಕೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅಳಿಯ ಡಾ.ರಪೀಕ್ ಅಹ್ಮದ್‌ಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಮಾಜಿ ಶಾಸಕ ಷಫಿಅಹ್ಮದ್ ನರೀಕ್ಷೆಯಂತೆಯೇ ಕಾಂಗ್ರೆಸ್‌ಗೆ ವಾಪಸಾದರು.

ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಬಿ.ಚಂದ್ರಪ್ಪ ಸಮ್ಮುಖದಲ್ಲಿ ಮಾತೃಪಕ್ಷಕ್ಕೆ ಷಫಿ ವಾಪಸಾದರು.

ತುಮಕೂರು ಕ್ಷೇತ್ರದ ಶಾಸಕರಾಗಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ಷಫಿಅಹ್ಮದ್ ಜಿಲ್ಲಾಧ್ಯಕ್ಷರಾಗಿಯೂ ಸತತ 10 ವರ್ಷ ಸೇವೆ ಸಲ್ಲಿಸಿದ್ದರು. ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲಿಲ್ಲ ಎಂದು ಕಳೆದ ಏಪ್ರಿಲ್‌ನಲ್ಲಿ ಸಿ.ಎಂ.ಇಬ್ರಾಹಿA ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಯಾಗಿ, ರಾಜ್ಯ ಉಪಾಧ್ಯಕ್ಷರಾಗಿಯೂ ನೇಮಕವಾಗಿದ್ದರು.

ಷಫಿಅಹ್ಮದ್ ಜೆಡಿಎಸ್‌ಗೆ ಸೇರ್ಪಡೆಯಾದರೂ ತುಮಕೂರು ನಗರ ಸೇರಿದಂತೆ ಜಿಲ್ಲೆಯ ಯಾವ ಕ್ಷೇತ್ರದಲ್ಲಿಯೂ ಮುಸ್ಲಿಂ ಸಮುದಾಯದ ಮತಗಳು ಕಾಂಗ್ರೆಸ್ ಬಿಟ್ಟು ಬಂದಿರಲಿಲ್ಲ ಹಾಗಾಗಿ, ಚುನಾವಣೆ ನಂತರ ಜೆಡಿಎಸ್ ಕೂಡ ಅವರನ್ನು ಉದಾಸೀನ ಮಾಡಿತ್ತು. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿಯ ನೆಪವಿಟ್ಟುಕೊಂಡು ಮಾತೃಪಕ್ಷಕ್ಕೆ ವಾಪಸಾಗಿದ್ದಾರೆ.

ಇತ್ತೀಚೆಗಷ್ಟೇ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದ ಷಫಿಅಹ್ಮದ್ ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್‌ಗೆ ವಾಪಸಾಗುವುದಾಗಿ ತಿಳಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net