ಜಿಲ್ಲೆಯ ಜನರಿಗೆ ಭಾವನಾತ್ಮಕ ಪತ್ರ ಬರೆದ ಮುದ್ದಹನುಮೇಗೌಡ

sp muddahanumegowda
Published on

ತುಮಕೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿ ಸೋಲು ಕಂಡ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಜಿಲ್ಲೆಯ ಜನರಿಗೆ ಭಾವನಾತ್ಮಕ ಪತ್ರಬರೆದಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನೀಡಿರುವ ತೀರ್ಪನ್ನು ಅತ್ಯಂತ ಗೌರವದಿಂದ ಸ್ವೀಕರಿಸಿದ್ದೇನೆ.
ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನೀಡಿದ್ದಕ್ಕಾಗಿ ನಮ್ಮ ಪಕ್ಷದ ವರಿಷ್ಠರು, ರಾಜ್ಯ ಹಾಗೂ ಜಿಲ್ಲೆಯ ನಮ್ಮ ಎಲ್ಲಾ ನಾಯಕರುಗಳಿಗೂ ನನ್ನ ಕೃತಜ್ಞತೆಗಳು ಎಂದು ಪತ್ರಿಕೆಗಳಿಗೆ ಬಿಡುಗಡೆ ಮಾಡಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಚುನಾವಣೆಯಲ್ಲಿ ನನಗೆ ಮತ ನೀಡಿದ ಮತದಾರರುಗಳಿಗೆ, ನನ್ನ ಪರವಾಗಿ ಶ್ರಮಿಸಿದ ರಾಜ್ಯದ ಹಾಗೂ ಜಿಲ್ಲೆಯ ಎಲ್ಲಾ ನಾಯಕರುಗಳು, ಮುಖಂಡರು, ಕಾರ್ಯಕರ್ತರು, ಹಿತೈಷಿಗಳಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದಿದ್ದಾರೆ.

ಫಲಿತಾಂಶ ಏನೇ ಇರಲಿ ನಾನು ಜಿಲ್ಲೆಯ ಜನತೆಗೆ ನನ್ನ ಅಳಿಲು ಸೇವೆಯನ್ನು ಮುಂದುವರಿಸುತ್ತೇನೆ. ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಆಶಿರ್ವಾದ ಸದಾ ನನ್ನ ಮೇಲಿರಲಿ. ನೂತನ ಸಂಸದ ವಿ.ಸೋಮಣ್ಣ ಅವರು ಜಿಲ್ಲೆಯ ಹಿತಕ್ಕಾಗಿ ಶ್ರಮಿಸಲಿ ಎಂದು ಶುಭಹಾರೈಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net