

ತುಮಕೂರು: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮಿತಿ ಮೀರಿದ್ದು ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ಕು ಆರೋಪಿಗಳನ್ನು ಬಂಧಿಸಿ, 1.20ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ನಗರದ ಬೆಳಗುಂಬ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಪ್ರಸನ್ನಕುಮಾರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ತುಮಕೂರಿನ ಶಾರಾದಾದೇವಿನಗರದ ಅಮಾನ್(23), ಶ್ರೀರಾಮನಗರದ ಮುದಾಸೀರ್ ಅಹಮದ್ ಷರೀಫ್(30), ಕೋತಿತೋಪು ಪ್ರಶಾಂತ(20), ಮುಬಾರಕ್ ಪಾಷ(37) ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಮಾರಾಟ ಮಾಡಿ ಹಣ ಗಳಿಸುವ ಸಲುವಾಗಿ ಅಕ್ರಮವಾಗಿ ವಶದಲ್ಲಿ ಇಟ್ಟುಕೊಂಡಿದ್ದ 1.20 ಲಕ್ಷ ರೂ. ಬೆಲೆ ಬಾಳುವ 4 ಕೆಜಿ 330 ಗ್ರಾಂ ತೂಕದ ಒಣಗಿದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.