

ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯನ್ನು ವಿಸ್ತರಿಸಲು ಸರ್ಕಾರ ಮುಂದಾಗಿದೆ. ಸುತ್ತಮುತ್ತಲ ಹಳ್ಳಿಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಲು ಜಿಲ್ಲಾಡಳಿತ ಯೋಜನೆ ರೂಪಿಸುತ್ತಿದೆ.
ಈ ಬಗ್ಗೆ ಪ್ರತಿಕಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ಸುತ್ತಮುತ್ತಲ ಹಳ್ಳಿಗಳನ್ನು ಸೇರಿಸಿಕೊಳ್ಳಲು ನಿರ್ಧರಿಸಲಾಗಿದ್ದು ಯೋಜನೆ ರೂಪಿಸಲು ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತೆಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ತುಮಕೂರು ವೇಗವಾಗಿ ಬೆಳೆಯುತ್ತಿದ್ದು ಪಾಲಿಕೆಯನ್ನು ವಿಸ್ತರಿಸುವ ಅಗತ್ಯವಿದೆ, ಈಗ ಭೀಮಸಂದ್ರದವರೆಗೂ ವಾರ್ಡ್ ಇದ್ದು, ಇದನ್ನು ಮಲ್ಲಸಂದ್ರದ ವರೆಗೂ ವಿಸ್ತರಿಸುತ್ತೇವೆ, ತುಮಕೂರು ಸುತ್ತಮುತ್ತಲ ಹಳ್ಳಿಗಳನ್ನು ಸೇರಿಸಿಕೊಂಡು ಬಿಬಿಎಂಪಿ ಮಾದರಿಯಲ್ಲಿ ಪಾಲಿಕೆ ವ್ಯಾಪ್ತಿಯನ್ನು ಹೆಚ್ಚಿಸುತ್ತೇವೆ ಎಂದರು.