ಸಾಲ ತೀರಿಸಲಾಗದೆ ಕೊರಟಗೆರೆ ಕ್ಷೇತ್ರದ ರೈತ ಆತ್ಮಹತ್ಯೆ

121212
Published on

ತುಮಕೂರು: ತೀವ್ರ ಬರದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ತುಮಕೂರು ತಾಲೂಕು ಕೋರಾ ಹೋಬಳಿ ನಂದಿಹಳ್ಳಿಯ ರೈತ ಚಂದ್ರಶೇಖರಯ್ಯ(49) ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಪ್ರತಿನಿಧಿಸುವ ಕೊರಟಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂದಿಹಳ್ಳಿಯ ಚಂದ್ರಶೇಖರ್ ಕೃಷಿ, ಮಕ್ಕಳ ವಿದ್ಯಾಭ್ಯಾಸ, ಸಂಸಾರ ನಿರ್ವಹಣೆ ಸೇರಿದಂತೆ ವಿವಿಧ ಕಾರಣಕ್ಕೆ ಸಾಲ ಮಾಡಿಕೊಂಡಿದ್ದರು.

ಸಾಲ ತೀರಿಸಲಾಗದೆ ಚಂದ್ರಶೇಖರಯ್ಯ ಜಮೀನಿನ ಹುಣುಸೆಮರದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ವೃದ್ಧ ತಾಯಿ ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net