

ತುಮಕೂರು:ರೈತರು ರಾಸುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆ ಹಾಕಿಸಬೇಕು ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಚ್.ಎ.ನಂಜೇಗೌಡ ಮನವಿ ಮಾಡಿದರು.
ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆ ಹಾಗೂ ತುಮಕೂರು ಹಾಲು ಒಕ್ಕೂಟದ ಸಹಯೋಗದಲ್ಲಿ ತುಮಕೂರು ತಾಲೂಕು ಕೆಸರಮಡು ಗ್ರಾಮದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಹಮ್ಮಿಕೊಂಡಿರುವ 7ನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ(ಎನ್ಎಡಿಸಿಪಿ)ಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಡಾ.ವೈ.ಜಿ.ಕಾಂತರಾಜು ಮಾತನಾಡಿ, ಕಾಲುಬಾಯಿ ರೋಗದ ನಿಮೂರ್ಲನೆ ಮಹತ್ವ ತಿಳಿಸಿದರು. ರೋಗ ನಿಮೂರ್ಲನೆ ಮಾಡಲು ಲಸಿಕೆಯೊಂದೇ ಮಾರ್ಗವಾಗಿದ್ದು, ಎಲ್ಲಾ ರೈತರು ತಮ್ಮ ರಾಸುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ರೋಗ ನಿಮೂರ್ಲನೆ ಮಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಮುಖ್ಯ ಪಶುವೈದ್ಯಾಧಿಕಾರಿ ಡಾ.ಜಿ.ಮಲ್ಲೇಶಪ್ಪ, ಡಾ.ಎಂ.ಸುರೇಶ್, ಗ್ರಾಪಂ ಸದಸ್ಯ ಕೃಷ್ಣಪ್ಪ, ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ದಿಲೀಪ್, ಕೆಸರುಮಡು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೆ.ಎಚ್.ಗಂಗಾಧರ್, ಕಾರ್ಯದರ್ಶಿ ರೇಣುಕಾರಾಧ್ಯ, ಹಿರಿಯ ಪಶುವೈದ್ಯಕಿಯ ಪರೀಕ್ಷಕ ಮಹದೇವಯ್ಯ ಇದ್ದರು.