

ತುಮಕೂರು: ರುಡ್ಸೆಟ್ ಸಂಸ್ಥೆ ವತಿಯಿಂದ ಏ.17 ರಿಂದ ಮೊಬೈಲ್ ರಿಪೇರಿ ಹಾಗೂ ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಹಮ್ಮಿಕೊಂಡಿದ್ದು, ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಮಾಹಿತಿಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ.9740982585 ಸಂಪರ್ಕಿಸಿ.