

ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಅಮಾನಿಕೆರೆಯಲ್ಲಿ ಬೋಟಿಂಗ್ ಆರಂಭಿಸಲಾಗಿದ್ದು ಜಿಲ್ಲಾಡಳಿತದ ವತಿಯಿಂದ ಮಹಿಳೆಯರಿಗೆ ಎರಡು ದಿನ ಉಚಿತ ವ್ಯವಸ್ಥೆ ಮಾಡಲಾಗಿದೆ.
ಆಗಸ್ಟ್ 12ರ ಶನಿವಾರ ಮತ್ತು ಆ.13ರ ಭಾನುವಾರ ಎರಡು ದಿನಗಳ ಕಾಲ ಮಹಿಳೆಯರಿಗೆ ಉಚಿತ ಬೋಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸೋಮವಾರದಿಂದ ನಿಗಧಿತ ಶುಲ್ಕ ಪಾವತಿಸಿ ಬೋಟಿಂಗ್ ಸೌಲಭ್ಯ ಪಡೆಯಬಹುದಾಗಿದೆ.