

ತುಮಕೂರು: ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಕುರುಡುತನದ ಹರಡುವಿಕೆಯನ್ನು ತಗ್ಗಿಸುವ ಉದ್ದೇಶದಿಂದ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು ಆಸಕ್ತಿಯುಳ್ಳ ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾನವ ಸಂಪನ್ಮೂಲ ಹಾಗೂ ಆಸ್ಪತ್ರೆ ಮೂಲಸೌಕರ್ಯ ವ್ಯವಸ್ಥೆ ಹೊಂದಿರುವ ಸಂಸ್ಥೆಗಳು ನವೆಂಬರ್ 18ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮಾಧಿಕಾರಿ ಕಚೇರಿ, ಡಿಎಚ್ಒ ಕಚೇರಿ ಸಂಕೀರ್ಣ, ತುಮಕೂರು ಸಂಪರ್ಕಿಸಿ.