

ತುಮಕೂರು ವಿವಿ ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮತ್ತು ಹಸಿರುದಳ ಸಹಯೋಗದಲ್ಲಿ ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಹೊರಗುತ್ತಿಗೆ ನೌಕರರಿಗೆ ಸೋಮವಾರ ಆಯೋಜಿಸಿದ್ದ "ಮುಟ್ಟಿನ ಸಂದರ್ಭದಲ್ಲಿ ನೈರ್ಮಲ್ಯ ನಿರ್ವಹಣೆ' ವಿಷಯ ಕುರಿತ ಮೂರು ದಿನಗಳ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದೇಶಗಳಲ್ಲಿ ಮುಟ್ಟು ಇದರ ಬಗ್ಗೆ ಹೆಚ್ಚು ಅರಿವಿದೆ, ಹಾಗಾಗಿ, ಅವರು ನೈರ್ಮಲ್ಯಕ್ಕೆ ಹೆಚ್ಚು ಕಾಳಜಿ ವಹಿಸುತ್ತಾರೆ. ನಮ್ಮ ಮಹಿಳಾ ಉದ್ಯೋಗಿಗಳ ಆರೋಗ್ಯ ದೃಷ್ಟಿಯಿಂದ ಮುಟ್ಟಿನ ಸಂದರ್ಭದಲ್ಲಿ ನೈರ್ಮಲ್ಯ ನಿರ್ವಹಣೆಯ ಬಗ್ಗೆ ನಿರಂತರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಜಾಗೃತಿ ಮೂಡಿಸುವುದು ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ಸಮಾಜಕಾರ್ಯ ವಿಭಾಗದ ಕಾರ್ಯ ಶ್ಲಾನೀಯ ಎಂದರು.
ಮಹಿಳೆಯರಲ್ಲಿ ಮುಟ್ಟು ಹಾಗೂ ಈ ಸಂದರ್ಭದಲ್ಲಿ ನೈರ್ಮಲ್ಯ ನಿರ್ವಹಣೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಹಿಳಾ ಹೊರಗುತ್ತಿಗೆ ನೌಕರರಿಗೆ ಪ್ರತಿ ತಿಂಗಳೂ ಸ್ಯಾನಿಟರಿ ಪ್ಯಾಡ್ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕುಲಪತಿ ಘೋಷಿಸಿದರು.
ಕುಲಸಚಿವೆ ನಾಹಿದಾ ಜಮ್ಜಮ್ ಮಾತನಾಡಿ, ಡಬ್ಲ್ಯೂಎಚ್ಒ ಮತ್ತು ಯುನಿಸೆಫ್ ಸಮೀಕ್ಷೆಯ ಪ್ರಕಾರ ಶೇ.60 ಮಹಿಳೆಯರಿಗೆ ಮುಟ್ಟಿನ ಬಗ್ಗೆ ಅರಿವೇ ಇರುವುದಿಲ್ಲ. ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರು ಹೇಳಿಕೊಳ್ಳುವುದಕ್ಕೆ ನಾಚಿಕೆಪಟ್ಟು ಖಿನ್ನತೆಗೆ ಒಳಗಾಗುತ್ತಾರೆ. ಮಹಿಳೆಯರಿಗೆ ಲೈಂಗಿಕ ಶಿಕ್ಷಣದ ಅವಶ್ಯಕತೆ ಇದ್ದು ನೈರ್ಮಲ್ಯ ಶುಚಿತ್ವ ಕಾಪಾಡಿಕೊಳ್ಳಲು ಅವರಿಗೆ ಮಾರ್ಗದರ್ಶನದ ಅವಶ್ಯಕತೆಯಿದೆ ಎಂದರು.
ಮುಟ್ಟಿನ ಅನೈರ್ಮಲ್ಯದಿಂದ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್, ಸೋಂಕಿನಂತಹ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಾರೆ. ಯಾವುದೇ ಸಂಕೋಚವಿಲ್ಲದೆ ಪ್ರತಿಯೊಬ್ಬ ಹೆಣ್ಣು ಮಗು ಕೂಡ ಮುಟ್ಟಿನ ನೈರ್ಮಲ್ಯದ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಸಮಾಜಕಾರ್ಯ ವಿಭಾಗದ ಅಧ್ಯಕ್ಷ ಪ್ರೊ.ಬಿ.ರಮೇಶ್, ಹಿರಿಯ ಪ್ರಾಧ್ಯಾಪಕ ಪ್ರೊ.ಕೆ.ಜಿ.ಪರಶುರಾಮ, ಹಸಿರುದಳದ ವ್ಯವಸ್ಥಾಪಕ ಕೆ.ಮೋಹನ್ ಕುಮಾರ್, ಸಮುದಾಯ ಸಂಘಟಕರಾದ ಸುನಿಲ್, ಶ್ರೀದೇವಿ ಇದ್ದರು.