ಉಚಿತ ತರಬೇತಿಗೆ ಅರ್ಜಿ

Application-1-1280x720
Published on

ತುಮಕೂರು: ಅಪೆರಲ್ ಟ್ರೈನಿಂಗ್ ಅಂಡ್ ಡಿಸೈನ್ ಸೆಂಟರ್ ಹಾಗೂ ರಾಷ್ಟ್ರೀಯ ಪರಿಶಿಷ್ಟ ಜಾತಿ ಹಣಕಾಸು ಮತ್ತು ಅಭಿವೃದ್ಧಿ ನಿಗಮ ಇವರ ಸಹಯೋಗದಲ್ಲಿ ಉಚಿತವಾಗಿ 4 ತಿಂಗಳ ಹೊಲಿಗೆ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು 8ನೇ ತರಗತಿ ಪಾಸಾಗಿದ್ದು, 18 ರಿಂದ 45 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ಮೂಲ ದಾಖಲೆ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಎಟಿಡಿಸಿ, ತುಮಕೂರು, ಸಿದ್ದರಾಮಣ್ಣ ಹಾಸ್ಟೆಲ್ ಕಾಂಪೌಂಡ್, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಎದುರು, ತುಮಕೂರು ಇವರಿಗೆ ನವೆಂಬರ್ 4ರೊಳಗಾಗಿ ಸಲ್ಲಿಸಬೇಕು.

ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯಾವಧಿಯಲ್ಲಿ ಸ್ಟೈಫಂಡ್ ನೀಡಲಾಗುವುದು. ಮಾಹಿತಿಗೆ 0816 2251618, ಮೊ.9844077096 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net