

ತುಮಕೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆ.31ರಂದು ಜಿಲ್ಲೆಯಾದ್ಯಂತ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ವಿಶೇಷ ತಪಾಸಣೆ ನಡೆಸಲಾಗುವುದು ಎಂದು ಜಿಲ್ಲಾ ಅಂಕಿತ ಅಧಿಕಾರಿ ಡಾ.ಪಿ.ಗಿರೀಶ್ ತಿಳಿಸಿದ್ದಾರೆ.
ತಪಾಸಣೆ ಸಂದರ್ಭದಲ್ಲಿ ಆಹಾರ ಉದ್ಯಮದಾರರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುವುದು. ನೋಂದಣಿ ಮತ್ತು ಪರವಾನಗಿ ಕಡ್ಡಾಯವಾಗಿ ಪಡೆಬೇಕು ಹಾಗೂ ಆಹಾರ ಮಾದರಿ ಸಂಗ್ರಹಿಸಿ ವಿಶ್ಲೇಷಣೆಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.