ಜುಲೈ 1ರಿಂದ ಗ್ರಾಪಂಗಳಲ್ಲಿ ಜನನ, ಮರಣ ನೋಂದಣಿ

tumkur zp office
Published on

ತುಮಕೂರು: ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿ ಬಲಪಡಿಸಲು ಹಾಗೂ ಘಟಿಸುವ ಶೇ.100ರಷ್ಟು ಜನನ, ಮರಣ ನೋಂದಣಿ ದಾಖಲಿಸಲು ಸರ್ಕಾರ ಗ್ರಾಪಂ ಕಾರ್ಯದರ್ಶಿಗಳಿಗೆ ಹೊಸ ಜವಾಬ್ದಾರಿ ನೀಡಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಜುಲೈ 1ರಿಂದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಜನನ ಅಥವಾ ಮರಣ ಘಟನೆ ಸಂಭವಿಸಿದ 30 ದಿನಗಳ ಒಳಗಾಗಿ ನೋಂದಣಿ ಮಾಡಿ ಪ್ರಮಾಣಪತ್ರ ವಿತರಿಸುವ ಕಾರ್ಯವನ್ನು ಆರಂಭ ಮಾಡಲಾಗುತ್ತಿದೆ.

ಪಂಚಾಯತಿಯ ಪ್ರತಿಯೊಬ್ಬ ಕಾರ್ಯದರ್ಶಿ ನಿಗಧಿತ ಅವಧಿಯೊಳಗಾಗಿ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ವಿತರಿಸುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಎಂದು ಜಿಪಂ ಸಿಇಒ ಜಿ.ಪ್ರಭು ಸೂಚಿಸಿದ್ದಾರೆ.

ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳವರೆಗಿನ ಪ್ರಕರಣಗಳಲ್ಲಿ ನೋಂದಾಯಿಸಲು ಪಂಚಾಯಿತಿ ಕಾರ್ಯದರ್ಶಿ ಹಾಗೂ 30 ದಿನಗಳಿಂದ ಒಂದು ವರ್ಷದವರೆಗಿನ ಪ್ರಕರಣಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಜನನ, ಮರಣ ನಡೆದ 21 ದಿನಗಳ ಒಳಗಾಗಿ ನೋಂದಣಿ ಮಾಡಿ ಪ್ರಮಾಣಪತ್ರವನ್ನು ಉಚಿತವಾಗಿ, 21 ದಿನಗಳಿಂದ 30 ದಿನಗಳ ನಡುವೆ ನೋಂದಣಿ ಮಾಡಿದರೆ 2 ರೂ. ವಿಳಂಬ ಶುಲ್ಕ, 30 ದಿನಗಳಿಂದ ಒಂದು ವರ್ಷದವರೆಗಿನ ಪ್ರಕರಣಗಳಲ್ಲಿ 5 ರೂ. ಶುಲ್ಕ ಪಡೆದು ನೋಂದಣಿ ಮಾಡಬಹುದು.

ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳ ಪ್ರಕಾರ 1 ವರ್ಷದ ಬಳಿಕ ನೋಂದಣಿ ಮಾಡಿದರೆ ಪ್ರಥರ್ಮ ದರ್ಜೆ ದಂಡಾಧಿಕಾರಿ ಅವರ ಆದೇಶದ ಜತೆಗೆ10 ರೂ. ವಿಳಂಬ ಶುಲ್ಕ ಪಡೆದು ನೋಂದಣಿ ಮಾಡಬೇಕು.
ಹೆಚ್ಚಿನ ವಿವರಗಳಿಗೆ ಇ-ಮೇಲ್ ವಿಳಾಸ ್ಚö್ಟಚಿbhZ್ಟಃಜಞZಜ್ಝಿ.್ಚಟಞ ಅಥವಾ ಇ-ಜನ್ಮ ಸಹಾಯವಾಣಿ 1800-425-6578 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net