ಗೃಹಲಕ್ಷ್ಮೀ ನೋಂದಣಿ ಕೇಂದ್ರಕ್ಕೆಪೊಲೀಸ್ ಭದ್ರತೆ!

Gruhalakshmii
Published on

ತುಮಕೂರು: ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಗಳು ನೋಂದಣಿ ಕೇಂದ್ರಗಳಲ್ಲಿ ಹೆಚ್ಚು ಜನಸಂದಣಿ ಉಂಟಾಗುವ ಸಾಧ್ಯತೆಯಿದ್ದು ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಈ ಬಗ್ಗೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದು ಗುರುವಾರದಿಂದ ಎಲ್ಲಾ ನೋಂದಣಿ ಕೇಂದ್ರದ ಮುಂದೆ ಪೊಲೀಸರು ಇರಲಿದ್ದಾರೆ.

ನೋಂದಣಿ ಪ್ರಕ್ರಿಯೆ ಭಾನುವಾರದ ರಜೆ ಹೊರತುಪಡಿಸಿ ಉಳಿದ ಎಲ್ಲಾ ದಿನಗಳಲ್ಲಿಯೂ ನಡೆಯುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಪವರ್ ಬ್ಯಾಕ್ ಅಪ್, ಇಂಟರನೆಟ್ ವ್ಯವಸ್ಥೆ ಕಂಪ್ಯೂಟರ್ ಪ್ರಿಂಟರ್‌ಗಳ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಹಾಗೂ ವಿದ್ಯುತ್ ಶಕ್ತಿ ವಿತರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದAತೆ ಕ್ರಮವಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net