ಗುಬ್ಬಿಯಲ್ಲಿ ಬಿಜೆಪಿ ಅಭ್ಯರ್ಥಿ ಜಿಪಂ ಮಾಜಿ ಸದಸ್ಯೆ ಡಾ.ನವ್ಯಾಬಾಬು?

07TMK_BJP_NAVYA_BABU
Published on

ತುಮಕೂರು: ತೀವ್ರ ಕುತೂಹಲ ಮೂಡಿಸಿರುವ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ಕಗ್ಗಂಟಾಗಿದ್ದು ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಲು ಸಂಧಾನ ಸೂತ್ರ ಹೈಕಮಾಂಡ್ ಮಟ್ಟದಿಂದಲೇ ಸಿದ್ಧವಾಗಿದೆ ಎನ್ನಲಾಗಿದೆ.

ಹೊಸ ರಾಜಕೀಯ ಬೆಳವಣಿಗೆಯಲ್ಲಿ ಗುಬ್ಬಿ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಯಾಗಿ ಜಿಪಂ ಮಾಜಿ ಸದಸ್ಯೆ ಡಾ.ನವ್ಯಾಬಾಬು ಹೆಸರು ಚಾಲ್ತಿಗೆ ಬಂದಿದ್ದು ಕುತೂಹಲ ಹೆಚ್ಚಿಸಿದೆ. ಬಿಜೆಪಿ ಈ ಹಿಂದೆಯೂ ಮಧುಗಿರಿ ಹಾಗೂ ಹುಲಿಯೂರುದುರ್ಗ ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಇತಿಹಾಸ ಹೊಂದಿದೆ.

ಜಿಪA ಮಾಜಿ ಸದಸ್ಯೆ ಡಾ.ನವ್ಯಾ ಅವರನ್ನು ಗುಬ್ಬಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಗಂಭೀರ ಚರ್ಚೆಯಾಗಿದ್ದು ದೆಹಲಿಗೆ ತಲುಪಿರುವ ಆಕಾಂಕ್ಷಿಗಳ ಪಟ್ಟಿಯಲ್ಲಿ ಡಾ.ನವ್ಯಾಬಾಬು ಅವರ ಹೆಸರು ಕೂಡ ಸೇರಿದೆ ಎಂಬ ಮಾತು ಬಿಜೆಪಿ ವಲಯದಲ್ಲಿದೆ.

ನಿಟ್ಟೂರು ಕ್ಷೇತ್ರದಲ್ಲಿ ಅಂದಿನ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಪತ್ನಿ ಭಾರತಿ ಅವರನ್ನು ಸೋಲಿಸಿ ಜಿಪಂ ಸದಸ್ಯೆಯಾಗಿ ಆಯ್ಕೆಯಾಗಿದ್ದ ಡಾ.ನವ್ಯಾಬಾಬು ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಗೆಲ್ಲುವ ಸಾಧ್ಯತೆ ಬಗ್ಗೆ ಲೆಕ್ಕಾಚಾರ ನಡೆದಿದೆ. ಡಾ.ನವ್ಯಾ ಪತಿ ಚಂದ್ರಶೇಖರಬಾಬು ಕೂಡ ಟಿಕೆಟ್‌ಗೆ ಲಾಬಿ ನಡೆಸಿದ್ದಾರೆ.

ಇವರ ಜತೆಯಲ್ಲಿ ದಿಲೀಪ್, ಜಿ.ಎನ್.ಬೆಟ್ಟಸ್ವಾಮಿ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net