ಮತದಾನ ಹಕ್ಕು ಪಡೆಯಲು ಅತಿಥಿ ಉಪನ್ಯಾಸಕರ ಪಟ್ಟು; ಜಿಲ್ಲಾಧಿಕಾರಿಗೆ ಮನವಿ

DC and Guest faculty
Published on

ತುಮಕೂರು: ಕರ್ನಾಟಕ ವಿಧಾನ ಪರಿಷತ್‌ಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ಗೆ ಮನವಿ ಸಲ್ಲಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಪಂ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಭೇಟಿಮಾಡಿದ ನಿಯೋಗ ಅತಿಥಿ ಉಪನ್ಯಾಸಕರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಎಲ್ಲಿಯೂ ಇಲ್ಲ ಹಾಗಾಗಿ, ಸೇರ್ಪಡೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ತುಮಕೂರು ವಿವಿ ಹಾಗೂ ಜಿಲ್ಲೆಯ ಎಲ್ಲಾ ಸರ್ಕಾರಿ ಪಿಯು, ಪದವಿ ಕಾಲೇಜುಗಳಲ್ಲಿ, ಪ್ರೌಢಶಾಲೆಗಳಲ್ಲಿಯೂ ಪೂರ್ಣಕಾಲಿಕ ಉಪನ್ಯಾಸ ಮಾಡುವ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಈ ಚುನಾವಣೆಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶ ಕಲ್ಪಿಸಬೇಕು ಎಂದರು.

ಜಿಪಂ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ, ತುಮಕೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಟಿ.ಎಸ್.ಸುನಿಲ್‌ಪ್ರಸಾದ್, ಅತಿಥಿ ಉಪನ್ಯಾಸಕರಾದ ವಿಜಯ್, ಡಾ.ಯತೀಶ್, ಡಾ.ಮಲ್ಲಿಕಾರ್ಜುನ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net